ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವಾ ಬೆಳಕ
ನಿನ್ನ ನಂಬಿದ ಜನಕೆ ಇಹುದಯ್ಯ ಎಲ್ಲ ಸುಖ
ತಂದೆ ಕಾಯೋ ನಮ್ಮ ಕರಿಮುಖ
ನೀಡಯ್ಯ ಬಾಳೆಲ್ಲ ಬೆಳಗುವಾ ಬೆಳಕ
ನಿನ್ನ ನಂಬಿದ ಜನಕೆ ಇಹುದಯ್ಯ ಎಲ್ಲ ಸುಖ
ತಂದೆ ಕಾಯೋ ನಮ್ಮ ಕರಿಮುಖ
ನಮಿಸಿ ನಲಿಯೋದು ನೋಡೋಕೆ ಚೆನ್ನ || 2 ||
ಗರಿಕೆ ತಂದರೆ ನೀನು
ಕೊಡುವೆ ವಾರವನ್ನ
ಗತಿ ನೀನೆ ಗಣಪನೆ ಕೈ ಹಿಡಿಯೋ ಮುನ್ನ
|| ಶರಣು ಶರಣಯ್ಯ||
ಸೂರ್ಯನೆದುರಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ ಓಡುವುದು ಭೀತಿ
ನೀಡಯ್ಯ ಬಾಳೆಲ್ಲ ಬೆಳಗುವ ಶಕುತಿ
ತೋರಯ್ಯ ನಮ್ಮಲ್ಲಿ ನಿನ್ನಯ ಪ್ರೀತಿ
|| ಶರಣು ಶರಣಯ್ಯ||
ಬೆನಕ ಬೆನಕ ಏಕದಂತ
ಪಚ್ಚೆಕಲ್ಲುಪಾಣಿಮೆಟ್ಲು
ಒಪ್ಪುವ ವಿಘ್ನೇಶ್ವರ ನಿನಗೆ
ಇಪ್ಪತ್ತೊಂದು ನಮಸ್ಕಾರಗಳು
No comments:
Post a Comment